Skip to main content

ನಳಿನ್ ಅವರು ಯತ್ನಾಳರ ನಿಭಾಯಿಸಿಲ್ಲ, ರೇಣುಕಾಚಾರ್ಯರ ನಿಯಂತ್ರಿಸಲಿಲ್ಲ, ಈಶ್ವರಪ್ಪರನ್ನು ಕಂಟ್ರೋಲ್ ಮಾಡಿಲ್ಲವಂತೆ !: ಕಾಂಗ್ರೆಸ್ ಹೀಗೆ ಹೇಳುತ್ತೆ


 


ಬೆಂಗಳೂರು(reporterkarnataka news): ರಾಜ್ಯದಲ್ಲಿ ಉಪ ಚುನಾವಣೆ ಕಾವು ಏರುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಈ ನಡುವೆ ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ತೀವ್ರಗೊಂಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಮತ್ತು ಪಕ್ಷದ ವರಿಷ್ಟರಿಗೆ ದೂರು ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳು, ಸರಕಾರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಮೇಲೆ ವಾಗ್ದಾಳಿ ನಡೆಸತೊಡಗಿದೆ.

ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರ ಪ್ರಕರಣವನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳದೆ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್ ಎಂದು ನಿರೂಪಿಸಿದ್ದೀರಿ ಎಂದು ನಳಿನ್ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಡಾಲರ್ ನಳಿನ್ ಅವರಿಗೆ ಯತ್ನಾಳ್ ಅವರನ್ನು ನಿಭಾಯಿಸಲಾಗಲಿಲ್ಲ, ರೇಣುಕಾಚಾರ್ಯರನ್ನು ನಿಯಂತ್ರಿಸಲಿಲ್ಲ ,ಈಶ್ವರಪ್ಪರನ್ನು ಕಂಟ್ರೋಲ್ ಮಾಡಲಿಲ್ಲ, ಶಾಸಕರ, ಸಚಿವರ ಜಗಳ ನಿಲ್ಲಿಸಲಿಲ್ಲ. ನಿಮ್ಮದೇ ಪಕ್ಷದವರಲ್ಲಿ ತಾವು ನಾಲಾಯಕ್ ಎನಿಸಿಕೊಂಡು ಮತ್ತೊಬ್ಬರ ಬಗ್ಗೆ ಮಾತಾಡುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

” ಕಾಮಿಡಿ ಕಿಲಾಡಿ ನಳಿನ್ ಕುಮಾರ್ ಕಟೀಲ್ ಬೇರೊಬ್ಬರ ಕೈಗೊಂಬೆ ಅಧ್ಯಕ್ಷರಾಗಿ ಪಕ್ಷದ ಆಂತರಿಕ ಕಲಹವನ್ನು ನಿಭಾಯಿಸಲು ಅಗದ್ದಕ್ಕೆ ತಮಗೆ ಬೆನ್ನೆಲುಬಿಲ್ಲ ಎನ್ನುವುದು! ನಿಮ್ಮ ಮನೆಯಲ್ಲಿ ಬೆಂಕಿ ಬಿದ್ದಿದ್ದರೆ ಕಾಂಗ್ರೆಸ್ ಕಡೆ ಬೆಟ್ಟು ತೋರಿಸಿ ಬಚಾವಾಗುವ ನಿಮ್ಮ ಈ ಹೇಡಿತನದಿಂದ ಪಕ್ಷವೊಂದರ ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್ ಎಂದು ನಿರೂಪಿಸಿದ್ದೀರಿ ಎಂದು ಕಾಂಗ್ರೆಸ್ ಹೇಳಿದೆ.

Comments